COMED-K , merged with CET : ಮುಂದಿನ ವರ್ಷದಿಂದ ಒಂದೇ ಸಿಇಟಿ; ಕಾಮೆಡ್-ಕೆ ರದ್ದು.

Karnataka-From next year- COMED-K - merged with CET

 

ಬೆಂಗಳೂರು, ಜೂ.22, 2022 : (www.justkannada.in news ) ತಾನು ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರಕಾರದ ಸಿಇಟಿ ವ್ಯವಸ್ಥೆಯಡಿಗೆ ವಾಪಸ್ ಬರಲು ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟ (ಕ್ಯುಪೇಕಾ) ಆಸಕ್ತಿ ತೋರಿದೆ.

ಈ ಸಂಬಂಧ ಒಪ್ಪಂದ ಆದ ಮೇಲೆ ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಯಥಾಸ್ಥಿತಿಯಲ್ಲಿದ್ದ ಎಂಜಿನಿಯರಿಂಗ್ ಶಿಕ್ಷಣ ಶುಲ್ಕವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹೊರೆಯಾಗದಂತೆ ಕೇವಲ ಶೇ.10ರಷ್ಟು ಮಾತ್ರ ಹೆಚ್ಚಿಸಲು ನಿರ್ಧರಿಸಲಾಗಿದೆ. ಶೇ.25ರಷ್ಟು ಶುಲ್ಕ ಏರಿಕೆ ಮಾಡಬೇಕೆಂಬ ಕ್ಯುಪೇಕಾ ಬೇಡಿಕೆ ಕಾರ್ಯಸಾಧುವಲ್ಲ ಎನ್ನುವುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕ್ಯುಪೇಕಾ ಪ್ರತಿನಿಧಿಗಳ ಜತೆ ವಿಕಾಸಸೌಧದಲ್ಲಿ ಬುಧವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಶುಲ್ಕ ಹೆಚ್ಚಳವು ಖಾಸಗಿ ಕಾಲೇಜುಗಳಲ್ಲಿ ಇರುವ ಸರಕಾರಿ ಎಂಜಿನಿಯರಿಂಗ್ ಸೀಟುಗಳಿಗೆ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದನ್ನು ಮೀರಿ ಹೆಚ್ಚಿನ ಶುಲ್ಕ ವಸೂಲು ಮಾಡಿದರೆ ಅಂತಹ ಕಾಲೇಜುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕೆ ಕ್ಯುಪೇಕಾ ಪ್ರತಿನಿಧಿಗಳು ಕೂಡ ಒಪ್ಪಿಕೊಂಡಿದ್ದಾರೆ’ ಎಂದರು.

ಖಾಸಗಿ ಕಾಲೇಜುಗಳು ದುಬಾರಿ ಶುಲ್ಕದ ಮ್ಯಾನೇಜ್ಮೆಂಟ್ ಸೀಟುಗಳಿಗಾಗಿ ತಾವೇ ನಡೆಸುತ್ತಿರುವ ಕಾಮೆಡ್-ಕೆ ಪರೀಕ್ಷೆಯನ್ನು ನಿಲ್ಲಿಸುವ ಸುಳಿವು‌ ನೀಡಿವೆ. ಇದರ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಸಮಿತಿ ರಚಿಸಲಾಗುವುದು. ಇದನ್ನು ಆಧರಿಸಿ, ಕ್ಯುಪೇಕಾ ಜತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅವರು ವಿವರಿಸಿದರು.

ಕಾಮೆಡ್-ಕೆ ಸ್ಥಗಿತಗೊಂಡರೆ, ಸರಕಾರವು ಸಿಇಟಿಯನ್ನು ಅಖಿಲ ಭಾರತ ವ್ಯಾಪ್ತಿಯಲ್ಲಿ ನಡೆಸಲಿದೆ. ಇದರಲ್ಲಿ ವಿದ್ಯಾರ್ಥಿಗಳು ಪಡೆಯುವ ರಾಂಕಿಂಗ್ ಆಧರಿಸಿ, ಈಗಿನಂತೆಯೇ ಸೀಟು ಹಂಚಲಾಗುವುದು. ಇದರಿಂದ ಈಗ ಆಗುತ್ತಿರುವ ಗೊಂದಲ ಮತ್ತು ಅಪವ್ಯಯ ಎರಡೂ ನಿವಾರಣೆ ಆಗಲಿವೆ ಎಂದು ಸಚಿವರು ನುಡಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕ್ಯುಪೇಕಾ ಅಧ್ಯಕ್ಷರೂ ಆದ ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರ ಪದಾಧಿಕಾರಿಗಳು ಇದ್ದರು.

key words : Karnataka-From next year- COMED-K – merged with CET

From next year COMED-K will be merged with CET ; Fee hike capped at 10% in private engineering colleges

 

Bengaluru: Limiting the hike in fees to 10% as against the demand to increase by 25% for engineering courses in private colleges for the current academic (2022-23), the government has announced on Wednesday that from next year COMED-K entrance test will be merged with Common Entrance Test (CET).

In a meeting chaired by Dr.C.N.Ashwath Narayan, Minister for Higher Education with representatives of KUPECA (Karnataka Unaided Private Engineering Colleges Association) at Vikasa Soudha, also agreed not to collect any other fees except a 10% hike on the existing fee. The fee hike is applicable to those students who have been allotted government seats in private engineering colleges. Further, KUPECA representatives assured, that they would voluntarily extend support to the government to take action against those who collect an extra fee by any other means.

The other major decision that emerged in the meeting is to cancel the COMED-K exam from next year. Instead, it will be merged with the CET and will be conducted at once at the All India level. The eligibility for admission will be based on the ranking students secure in the merged CET and seat sharing will continue as at present. Minister Narayan said that the modalities for merging COMED-K with CET will be worked out as the next course of action.
Further, he told, “KUPECA had demanded a 25% hike in fees as there had been no increase for last two years, from 2020-21. But, on consultation, they finally agreed to a 10% hike.”
Representatives of KUPECA were present.