ಬೆಂಗಳೂರು, ಆಗಸ್ಟ್ 08, 2019 (www.justkannada.in): ರಾಜ್ಯದ ಹಲವು ಕಡೆ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ.
ಕಾವೇರಿ ಜಲಾನಯನ ಪ್ರದೇಶದ ನದಿಗಳಾದ ಕಾವೇರಿ, ಲಕ್ಷ್ಮಣ ತೀರ್ಥ ಹಾಗೂ ಹೇಮಾವತಿ ಪಾತ್ರದಲ್ಲೂ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದೆ.
ಜಲಾಶಯದ ಮಟ್ಟ 100 ಅಡಿಗಳನ್ನು ದಾಟಿದ್ದು, ಹೀಗಾಗಿ ಯಾವುದೇ ಕ್ಷಣದಲ್ಲಿ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆಯಿದೆ. ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರ ವಹಿಸುವಂತೆ ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.