ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ: ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯ ಮುನ್ಸೂಚನೆ.

ಬೆಂಗಳೂರು,ಜುಲೈ,9,2022(www.justkannada.In): ರಾಜ್ಯದ ಕರಾವಳಿ,ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಈ ನಡುವೆ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ  ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ 3 ದಿನ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ 5 ದಿನ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಇನ್ನು ಸುರಿಯುತ್ತಿರುವ ನಿರಂತರ ಮಳೆಗೆ ಜನರು ತತ್ತರಿಸಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗಿನಲ್ಲಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಳಗಾವಿ, ಕಲಬುರ್ಗಿ, ಬೀದರ್​​ನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​  ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದ್ದು, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದಿದೆ.

Key words: Heavy rain- another -5 days – state.