ಪ್ರವಾಹ ಮುನ್ನೆಚ್ಚರಿಕೆ : ಕೆ.ಆರ್.ಎಸ್ ನಿಂದ ಒಂದು ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ, ಕಂಟ್ರೋಲ್ ರೂಂ ಪ್ರಾರಂಭ,

 

ಮೈಸೂರು ಆ.10.2019 : ಜಿಲ್ಲೆಯಲ್ಲಿ ಪ್ರಸ್ತುತ ಉಂಟಾಗಿರುವ ನೆರೆ ಹಾವಳಿ/ಪ್ರವಾಹ ಪರಿಸ್ಥಿತಿ ಹಿನ್ನೆಲಯಲ್ಲಿ ತುತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ತಾಲ್ಲೂಕು ಕೇಂದ್ರಗಳಲ್ಲಿರುವ ತಾಲ್ಲೂಕು ಪಂಚಾಯತ್ ಕಚೇರಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಅಧಿಕಾರಿ ಕೆ. ಜ್ಯೋತಿ ತಿಳಿಸಿದ್ದಾರೆ.

ಕಂಟ್ರೋಲ್ ರೂಂ ನಲ್ಲಿ ದಿನದ 24 ಗಂಟೆಗಳೂ ಕಾರ್ಯ ನಿರ್ವಹಿಸುವಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ಸಾರ್ವಜನಿಕರು ನೆರೆ ಹಾವಳಿ/ ಪ್ರವಾಹ ವಿಷಯಕ್ಕೆ ಸಂಬಂಧಿಸಿದಂತೆ ಸ್ವೀಕೃತಗೊಂಡ ದೂರು ಮನವಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವಂತೆ ಕ್ರಮ ವಹಿಸಲಾಗುವುದು.

ಕಂಟ್ರೋಲ್ ರೂಂ ಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಹಾಗೂ ದೂರವಾಣಿ ವಿವರ ಇಂತಿದೆ.
ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಕುಮಾರ್-ದೂರವಾಣಿ ಸಂಖ್ಯೆ 0821-2414433, ನಂಜನಗೂಡು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಂಠರಾಜೇ ಅರಸ್ 08221-225353, ಟಿ. ನರಸೀಪುರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ 08227-261223, ಹುಣಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ 08222-252028, ಕೆ.ಆರ್.ನಗರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ 08223-262824, ಪಿರಿಯಾಪಟ್ಟಣ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೃತಿ, 08223-273456, ಹೆಚ್.ಡಿ.ಕೋಟೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ 08228-255277 ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ|| ಎಸ್. ಪ್ರೇಮ್‍ಕುಮಾರ್ 0821-2526322 ಕರೆ ಮಾಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಹ ಮುನ್ನೆಚ್ಚರಿಕೆ ಸೂಚನೆ
ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದ್ದು. ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 50,000 ರಿಂದ 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಕೃಷ್ಣರಾಜಸಾಗರ ಕಾನೀನಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key wors : krs-out.flow-warning