ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೋ ಚಿತ್ರೀಕರಣ ಬಂದ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.

ಬೆಂಗಳೂರು,ಜುಲೈ,15,2022(www.justkannada.in): ಸರ್ಕಾರಿ ಕಚೇರಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ಸರ್ಕಾರ ನಿರ್ಬಂಧ ವಿಧಿಸಿದೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ತಮ್ಮ ತಮ್ಮ ಕೆಲಸ ಕಾರ್ಯಗಳಿಗಾಗಿ  ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಆಗಮಿಸುತ್ತಾರೆ. ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ,ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತದೆ.covid-dead-body-cancels-license-order-state-government

ಹಾಗೆಯೇ ಅದರಲ್ಲೂ  ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿದ್ದು,  ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡದಂತೆ ಸರ್ಕಾರಕ್ಕೆ  ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಚಿತ್ರೀಕರಣ  ಮಾಡದಂತೆ ಆದೇಶ ಹೊರಡಿಸಿದೆ.

Key words: Photo – video -shooting -government offices – ban

ENGLISH SUMMARY…

State Govt. prohibits visitors to Govt. offices from taking pictures or videos in government offices

Bengaluru, July 15, 2022 (www.justkannada.in): The Government of Karnataka has issued orders restricting taking photographs and videos in government offices.
Taking pictures and videos in any department government offices by private persons is prohibited. There are government offices in all the districts and taluk headquarters which are visited daily by hundreds of people for various works. A few people are found taking pictures of the office and videos and putting it in social media with different objectives. Several times it degrades the dignity of the State Government departments.covid-dead-body-cancels-license-order-state-government
The State Government Employees’ Association State President had appealed to the State Government, stating that it also causes embarrassment to the women employees. Hence any outside people who visit the State Government offices should be prohibited from taking pictures and videos.
Keywords: State Government offices/ pictures, videos prohibited/ orders issued