ಬೆಂಗಳೂರು,ಜುಲೈ,19,2022(www.justkannada.in): ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ, ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ 6 ದಿನ ರಾಷ್ಟ್ರ ಧ್ವಜ ಹಾರಿಸಬೇಕು. ಶಾಲಾ ಕಾಲೇಜು, ಮದರಸಾಗಳಲ್ಲಿ ರಾಷ್ಟ್ರ ಭಕ್ತಿ ಮೂಡಿಸುವ ಗೀತಗಾಯನ, ಪ್ರಭಂದ, ಕ್ವಿಜ್, ಸ್ವಾತಂತ್ರ್ಯ ಹೋರಾಟಗಾರ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಹೇಳಿದೆ.
ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸುವುದು ಕಡ್ಡಾಯವಾಗಿದೆ. ಹೀಗಾಗಿ ಯಾವುದೇ ಕುಂಟು ನೆಪ ಹೇಳದೆ ಎಲ್ಲಾ ಮದರಸಾಗಳಲ್ಲಿ ರಾಷ್ಟ್ರ ಧ್ವಜ ಕಡ್ಡಾಯವಾಗಿ ಹಾರಿಸಬೇಕು. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜು, ಮದರಸಾಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲಾ ಶಿಕ್ಷಣ ಸಿಬ್ಬಂದಿಗಳು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಸೂಚನೆ ತಿಳಿಸಿದೆ.
Key words: Independence Day -mandatory – fly – national flag -all – schools-colleges – madrasa