CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.92.71 ರಷ್ಟು ಫಲಿತಾಂಶ.

 ನವದೆಹಲಿ,ಜುಲೈ,22,2022(www.justkannada.in): ಸಿಬಿಎಸ್‍ ಇ  12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಒಟ್ಟು 14,44,341 ಮಂದಿ ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 14,35,366 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 13,30,662 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇ.94.54 ವಿದ್ಯಾರ್ಥಿನೀಯರು ಹಾಗೂ ಶೇ.91.25 ಬಾಲಕರು ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.

CBSE 12 ನೇ ಫಲಿತಾಂಶ  results.cbse.nic.in ಮತ್ತು cbse.gov.in ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ.

Key words: CBSE- 12th Class – Result – 92.71 percent.