ಬೆಂಗಳೂರು, ಜುಲೈ 31, 2022 (www.justkannada.in): ‘ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್‌ನ ಮಹಮ್ಮದ್ ಫಾಝಿಲ್ ಕೊಲೆ ತನಿಖೆ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ಪ್ರವೀಣ್ ಕೊಲೆ ಪ್ರಕರಣದಲ್ಲಿ ಈಗಿರುವ ಮಾಹಿತಿ ಪ್ರಕಾರ ಆರೋಪಿಗಳಿಗೆ ಎರಡು ರಾಜ್ಯಗಳ (ಕರ್ನಾಟಕ, ಕೇರಳ) ನಂಟು ಇದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಫಾಝಿಲ್ ಕೊಲೆ ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ. ಪ್ರಕರಣದ ಹಿನ್ನೆಲೆ ಅರಿಯದೇ ಎನ್‌ಐಎಗೆ ಕೊಡಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರವೀಣ್ ಕೊಲೆ ಪ್ರಕರಣದಲ್ಲಿ ಈಗಿರುವ ಮಾಹಿತಿ ಪ್ರಕಾರ ಆರೋಪಿಗಳಿಗೆ ಎರಡು ರಾಜ್ಯಗಳ (ಕರ್ನಾಟಕ, ಕೇರಳ) ನಂಟು ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆಯ ಹೊಣೆ ಎನ್‌ಐಎಗೆ ಒಪ್ಪಿಸಿದ್ದೇವೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.