ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ಶಿವಮೊಗ್ಗ ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿವೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.
ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ರಾಷ್ಟç ಮತ್ತು ರಾಜ್ಯ ಮಟ್ಟದ ತಂತ್ರಜ್ಞರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಬಹುದಿನಗಳ ಈ ಕನಸಿನ ಯೋಜನೆಯ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸತತ ಪರಿಶ್ರಮ, ಸಂಕಲ್ಪ ಹಾಗೂ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರ ಸಹಕಾರವೂ ಕೂಡ ಸ್ಮರಣೀಯವಾದುದು ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು.