ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ.
ಕಳೆದ 24 ಗಂಟೆಯಲ್ಲಿ 4,777 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈವರೆಗೆ 5,28,510 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 43,994 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
. ದೇಶದಲ್ಲಿ ಈವರೆಗೆ 4,39,95,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 15,63,151 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
ದೇಶದಲ್ಲಿ ಈವರೆಗೆ 2,17,56,67,942 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,02,283 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.