ಬೆಂಗಳೂರು, ಅಕ್ಟೋಬರ್ 12, 2022 (www.justkannada.in): ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ’ ಸಿನಿಮಾ ಐಎಂಡಿಬಿ ರೇಟಿಂಗ್ನಲ್ಲೂ ಮಿಂಚಿದೆ.
ಹೌದು. ಸದ್ಯ ಸ್ಯಾಂಡಲ್ ವುಡ್ ಮಾತ್ರವಲ್ಲದೇ ಎಲ್ಲ ಭಾಷೆಗಳ ಹಾಟ್ ಫೇವರೇಟ್ ಆಗಿರುವ ಕಾಂತಾರ ಚಿತ್ರ ಐಎಂಡಿಬಿಯಲ್ಲಿ 10ಕ್ಕೆ 9.6 ಅಂಕ ಪಡೆದುಕೊಂಡಿದೆ.
ಸುಮಾರು 12 ಸಾವಿರ ಜನರು ವೋಟ್ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೇಟಿಂಗ್ನಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ.
ಇನ್ನು ‘ಕಾಂತಾರ’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಾಲು ಸಾಲು ರಜೆ ಸಿಕ್ಕಿದ್ದು ಚಿತ್ರಕ್ಕೆ ವರದಾನ ಆಗಿದೆ. ಈ ಚಿತ್ರದ ಕಲೆಕ್ಷನ್ ಎಷ್ಟು ಎಂಬುದರ ಪಕ್ಕಾ ಲೆಕ್ಕದ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ.
ಹಿಂದಿಯಲ್ಲೂ ಸಿನಿಮಾ ರಿಲೀಸ್ ಆಗುತ್ತಿದೆ. ಚಿತ್ರದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ. ಈ ಸಿನಿಮಾದಿಂದ ಹೊಂಬಾಳೆ ಫಿಲ್ಮ್ಸ್ ಭರಪೂರ ಲಾಭ ಕಂಡಿದೆ.