ಬೆಂಗಳೂರು,ಅಕ್ಟೋಬರ್,13,2022(www.justkannada.in): ಮಳೆಹಾನಿ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.
ಇಂದು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಳೆಹಾನಿ , ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಮಾತನಾಡಿದ ಅವರು, ಮಳೆಹಾನಿ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾಗಬಾರದು ಮನೆ ಹಾನಿ ಕುರಿತ ದಾಖಲಾತಿಯಲ್ಲಿ ಲೋಪ ಸಲ್ಲದು. ಜಿಲ್ಲಾಧಿಕಾರಿಗಳು ಖುದ್ಧು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ ಪರಿಹಾರ ನೀಡಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದರು.
ಸೇತುವೆಗಳ ನಿರ್ಮಾಣ, ದುರಸ್ತಿ ಮರುನಿರ್ಮಾಣ ಕಾರ್ಯ, ಹಾನಿಗೊಳಗಾದ ವಿದ್ಯುತ್ ಕಂಬಗಳ ದುರಸ್ತಿ ಮಾಡಬೇಕು. ಟ್ರಾನ್ಸ್ ಫಾರ್ಮರ್ ಹಾಳಾಗಿದ್ದರೇ 24 ಗಂಟೆಯೊಳಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು.
Key words: CM -Bommai – DC-visit -rain –damaged- areas