ಬೆಂಗಳೂರು,ಅಕ್ಟೋಬರ್,19,2022(www.justkannada.in): ಕೆಎಸ್ಆರ್ಟಿಸಿ ಸಿಬ್ಬಂದಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ಧಿ ನೀಡಿದ್ದು, ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ 50 ಲಕ್ಷ ರೂ ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.
ಕೆಎಸ್ ಆರ್ ಟಿಸಿ ನಿಗಮ ವಿಮಾ ಯೋಜನೆಗೆ ಎಸ್ ಬಿಐ ಬ್ಯಾಂಕ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಗೆ ಕೆಎಸ್ ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಹಾಗೂ ಎಸ್ಬಿಐ ಡಿಜಿಎಂ ಪಂಕಜ್ ತಪ್ಲಿಯಾಲ್ ಸಹಿ ಹಾಕಿದರು.
Key words: Good news – KSRTC –staff-Rs 50 lakh- accident- insurance- scheme.