ಮೈಸೂರು,ಅಕ್ಟೋಬರ್,24,2022(www.justkannada.in): ನಿರಂತರ ಮಳೆಯಿಂದಾಗಿ ಮೈಸೂರು ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದ್ದು ಶೀಘ್ರದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.
ಮಹಾರಾಜ ಕಾಲೇಜಿನಲ್ಲಿ ಮಹಾಬೋದಿ ಶಾಲೆಯ ವತಿಯಿಂದ ಆಯೋಜನೆಗೊಂಡಿರುವ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಮೈಸೂರಿನ ಡಿಡಿಪಿಐ ರಾಮಚಂದ್ರ ರಾಜೇ ಅರಸ್ , ನಿರಂತರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸುಮಾರು 240 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಹಾಳಾಗಿವೆ ಎಂದು ಮಾಹಿತಿ ತಿಳಿದು ಬಂದಿದೆ. ಅವುಗಳ ದುರಸ್ತಿ ಕಾರ್ಯಕ್ಕೆ ಶೀಘ್ರದಲ್ಲೇ ಕ್ರಮ ವಹಿಸಲು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಅಂತಹ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನು ಮಾಡಲಾಗುವುದು.
ಅಲ್ಲಿವರೆಗೆ ದುರಸ್ತಿ ಹಂತದಲ್ಲಿರುವ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸದಂತೆ ಸೂಚನೆ ನೀಡಲಾಗಿದೆ. ಕುಸಿಯುವ, ಸೊರುವಂತ ಕಟ್ಟಡಗಳಲ್ಲಿ ಪಾಠ ಪ್ರವಚನ ಮಾಡದಂತೆ ಸೂಚಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದ್ದೇವೆ ಎಂದು ಡಿಡಿಪಿಐ ರಾಮಚಂದ್ರ ರಾಜ್ ಅರಸ್ ಹೇಳಿದರು.
Key words: government schools -damaged –rain- DDPI -Ramachandraraje Ars