ಬೆಂಗಳೂರು, ಅಕ್ಟೋಬರ್ 27, 2022 (www.justkannada.in): ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದೀಪಾವಳಿ ಹಬ್ಬದ ಕೊನೆ ದಿನವಾದ ಬಲಿಪಾಡ್ಯವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ವಾಮನನು ತ್ರಿವಿಕ್ರಮರೂಪಿಯಾಗಿ ಬಲಿಚಕ್ರವರ್ತಿಯನ್ನು ಸುತಲಲೋಕಕ್ಕೆ ಕಳುಹಿಸಿದ ದಿನವೇ ಬಲಿಪ್ರತಿಪತ್.
ಮಹಾಧಾರ್ವಿುಕನಾದ ಬಲಿಮಹಾರಾಜನಿಗೂ ತಾನು ಎಲ್ಲವನ್ನು ಗೆದ್ದ ಮಹಾಚಕ್ರವರ್ತಿ ಎಂಬ ಅಹಂಕಾರ ಬಂದಿತು. ಆ ಅಹಂಕಾರವನ್ನು ನಾಶಗೊಳಿಸಬೇಕೆಂದೇ ನಾರಾಯಣನು ವಾಮನರೂಪಿಯಾಗಿ ಬಂದ ದಿನದ ಅಂಗವಾಗಿ ಬಲಿಪಾಢ್ಯಮಿಯನ್ನು ಆಚರಿಸಲಾಗತ್ತದೆ.
ಇನ್ನು ಮಕ್ಕಳು, ಯುವಕರು ಪಟಾಕಿ ಸಿಡಿಸಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಆದರೆ ಈ ಬಾರಿ ಪಟಾಕಿ ಅಬ್ಬರ ಕೊಂಚ ಕಡಿಮೆಯಾಗಿದೆ. ಪ್ರತಿ ವರ್ಷ ಜನರಲ್ಲಿ ಪರಿಸರ ಜಾಗೃತಿ ಮೂಡುತ್ತಿರುವ ಹಿನ್ನೆಲೆಯಲ್ಲಿ ಪಟಾಕಿ ಅಬ್ಬರ ನಿಧಾನವಾಗಿ ತಗ್ಗುತ್ತಿದೆ.