ನವದೆಹಲಿ,ನವೆಂಬರ್,2,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ.
ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದರು. ಮನವಿ ಮೇರೆಗೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 7ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಡಿಕೆ ಶಿವಕುಮಾರ್ ಮಾಡಿದ್ದರು. ಆದರೆ ಮನವಿಯನ್ನು ಜಾರಿ ನಿರ್ದೇಶನಾಲಯತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಅವರು ಇಡಿ ವಿಚಾರಣೆಗೆ ಹಾಜರಾಗಿದ್ದರು.
Key words: Illegal-money -laundering case- against- DK Shivakumar-Court- notice – ED.