ಕಲಬುರಗಿ,ನವೆಂಬರ್,2,2022(www.justkannada.in): 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದು ನಿನ್ನೆ ಬಾಲಕಿಯ ಶವ ಕಬ್ಬಿನ ಗದ್ಧೆಯಲ್ಲಿ ಪತ್ತೆಯಾಗಿದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಕಲಬುರಗಿ ಎಸ್ಪಿ ಇಶಾ ಪಂತ್, ಆರೋಪಿ ಬಗ್ಗೆ ಕೆಲ ಮಾಹಿತಿ ಸಿಕ್ಕಿವೆ. ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗನೆ ಆರೋಪಿಯನ್ನು ಪತ್ತೆ ಮಾಡುತ್ತೇವೆ. ಈ ಕೃತ್ಯದಿಂದ ಮನಸ್ಸಿಗೆ ಬಹಳ ನೋವಾಗಿದೆ. ಆರೋಪಿಗಳು ಯಾರೇ ಆದರೂ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
Key words: kalburgi- girl – raped -murder