ಬೆಂಗಳೂರು,ನವೆಂಬರ್,11,2022(www.justkannada.in): ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಣದಲ್ಲಿ ವಂದೇ ಭಾರತ ಎಕ್ಸ್ಪ್ರೆಸ್ ಮತ್ತು ಭಾರತ ಗೌರವ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ಮೋದಿ ಅವರು, ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ, ವಂದೇ ಭಾರತ ಎಕ್ಸ್ಪ್ರೆಸ್ ಹಾಗೂ ಭಾರತ ಗೌರವ್ ಕಾಶಿ ದರ್ಶನ ರೈಲ್ವೆಗೆ ಚಾಲನೆ ನೀಡಿದರು.
ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ , ಸಿಎಂ ಬಸವರಾಜ ಬೊಮ್ಮಾಯಿ, ಕೇಂಧ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕಾಮದೇನು ಸ್ಮರಣಿಕೆ ನೀಡಿದರು.
Key words: Prime Minister- Modi -launched -Vande Bharat Express – Bharat Gaurav Kashi Darshan- train.