ಬೆಂಗಳೂರು,ನವೆಂಬರ್,19,2022(www.justkannada.in): ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಕಚೇರಿ ಮುಂದೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು. ಪರಿಷ್ಕರಣೆ ಹೆಸರಲ್ಲಿ ಮತದಾನದ ಹಕ್ಕು ಕಸಿಯುತ್ತಿದ್ದಾರೆ ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Key words: Allegation – illegal- voter ID-Congress -protests