ಮುಂಬೈ, ಏಪ್ರಿಲ್ 23, 2020 (www.justkannada.in): : ರಿಪಬ್ಲಿಕ್ ಟಿವಿಯ ಸಂಸ್ಥಾಪಕ ಹಾಗೂ ಸಂಪಾದಕರೂ ಆಗಿರುವ ಅರ್ನಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಪೊಲೀಸ್ ದೂರುಗಳ ಸುರಿಮಳೆ ಗೈದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರು ಅರ್ನಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಲ್ಘಾರ್ ಗುಂಪು ಹತ್ಯೆ ಪ್ರಕರಣವನ್ನು ಸೋನಿಯಾ ಗಾಂಧಿಗೆ ತಳುಕು ಹಾಕಿ, ಅವರ ವಿರುದ್ಧ ತಮ್ಮ ಮಾಧ್ಯಮದಲ್ಲಿ ಅವಹೇಳನಕಾರಿ ಭಾಷೆಯನ್ನು ಉಪಯೋಗಿಸಿ, ಉದ್ದೇಶಪೂರ್ವಕವಾಗಿಯೇ ದ್ವೇಷಪೂರಿತ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಿ, ಛತ್ತೀಸ್ಗಢದ ಕಾಂಗ್ರೆಸ್ ನಾಯಕರು ರಾಯ್ಪುರ್ದಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ರೀತಿ ದೇಶದ ನಾನಾ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ.