ನವದೆಹಲಿ,ಮೇ,9,2023(www.justkannada.in): ಮುಸ್ಲಿಂ ಸಮುದಾಯಕ್ಕಿದ್ದ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸಿ ಆದೇಶ ಹೊರಡಿಸಿದ್ದ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ.
ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಆದೇಶಕ್ಕೆ ಏಪ್ರಿಲ್ 25ರಮದು ತಡೆ ನೀಡಿತ್ತು. ಜೊತೆಗೆ, ಇಂದು ಮತ್ತೆ ನ್ಯಾ.ಕೆ.ಎಂ.ಜೋಸೆಫ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಯಿತು.
ಈ ವೇಳೆ ಜುಲೈ 25ರವರಗೂ ಹೊಸ ಮೀಸಲಾತಿ ಅನುಷ್ಟಾನ ಇಲ್ಲ ಎಂದು ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವಿಚಾರಣೆಯನ್ನ ಜುಲೈ 25ಕ್ಕೆ ಮುಂದೂಡಿದೆ.
Key words: Abolition – Muslim –reservation-Supreme Court -adjourned – hearing