ಮೈಸೂರು,ಸೆಪ್ಟೆಂಬರ್,12,2020(www.justkannda.in) : ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತ ಡಾ.ಸಿ.ಚಂದ್ರಪ್ಪನ ಅವರು ರಚಿಸಿದ ‘’ಮಹಾಮಾನವನ ಮಹಾಯಾನ’’ ಕೃತಿಯನ್ನು ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರು ಲೋಕಾರ್ಪಣೆ ಮಾಡಿದರು.
ವಿಜ್ಞಾನಭವನದಲ್ಲಿ ಶನಿವಾರ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಮಾನಸಗಂಗೋತ್ರಿ ದಲಿತ ವಿದ್ಯಾರ್ಥಿ ಒಕ್ಕೂಟಗಳ ಜಂಟಿ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಅಂಬೇಡ್ಕರ್ ಕುರಿತ ಗೀತೆಗಳನ್ನು ಹಾಡುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಚಂದ್ರಹಾಸ, ಡಾ. ಉಮೇಶ್, ಜಿ. ನರಸಿಂಹಮೂರ್ತಿ, ಋತ್ವಿಕ್ ಗೆ ರಾಜ್ಯ ಮಟ್ಟದ ಡಾ. ಬಿ. ಆರ್. ಅಂಬೇಡ್ಕರ್ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಜ್ಯಾಧ್ಯಕ್ಷ ಡಾ.ಸಿ.ವೆಂಕಟೇಶ್, ಸರ್ಕಾರ ನಿವೃತ್ತ ಕಾರ್ಯದರ್ಶಿ ಡಾ.ಸಿ.ಸೋಮಶೇಖರ್, ಪ್ರೊ.ಮಹೇಶ್ ಚಂದ್ರಗುರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ನಂದೀಶ್ ಹಂಚೆ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
key words : About-Ambedkar-Mahamanavana-Mahayana-philanthropic