ಮೈಸೂರು,ಅಕ್ಟೋಬರ್,3,2020(www.justkannada.in): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣವನ್ನ ಖಂಡಿಸಿ ಮೈಸೂರಿನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣವನ್ನ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅತ್ಯಾಚಾರ ಗಳು ನಡೆಯದಂತೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಈ ಮೂಲಕ ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಭಾರತ ದೇಶದಲ್ಲಿ ಹೆಣ್ಣಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಆದರೆ, ಹಥ್ರಾಸ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಪೈಶಾಚಿಕವಾಗಿ ಕೊಲೆ ಮಾಡಲಾಗಿದೆ. ಈ ರೀತಿ ಅಮಾನವೀಯವಾಗಿ ವರ್ತಿಸಿದವರಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿದರು.
Key words: ABVP- protests –mysore- rape case- Hatras