ಕಲ್ಬುರ್ಗಿ,ಮೇ,9,2019(www.justkannada.in): ಕಲ್ಬುರ್ಗಿ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಎಸ್ಪಿ ವಿಎಂ ಜ್ಯೋತಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಉಪನೋಂದಣಾಧಿಕಾರಿ ಕಾರಿನಲ್ಲಿ 60 ಸಾವಿರ ರೂ ಪತ್ತೆಯಾಗಿದೆ ಎನ್ನಲಾಗಿದೆ.
ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಸಿಬ್ಬಂದಿಗಳನ್ನ ವಿಚಾರಣೆ ನಡೆಸಿದ್ದಾರೆ.
Key words: ACB- attack -office – Kalbargi- Deputy- Registrar -Office