ವಿಜಯಪುರ,ಮಾರ್ಚ್,24,2025 (www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ ಮೂವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ತಾಲೂಕಿನ ಕಗ್ಗೊಡದ ಬಳಿ ಈ ಘಟನೆ ಸಂಭವಿಸಿದೆ. ವೆಂಕು ಚವ್ಹಾಣ (43) ಮೃತಪಟ್ಟವರು. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ವಿಜಯಪುರ ತಾಲೂಕಿನ ಕುಮಟಗಿ ತಾಂಡಾದಿಂದ ಕಗ್ಗೋಡದ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದರು.
ವೆಂಕು ಚವ್ಹಾಣ ಮೂವರು ವಿದ್ಯಾರ್ಥಿನಿಯರನ್ನು ಪರೀಕ್ಷಾ ಕೇಂದ್ರಕ್ಕೆ ಬೈಕ್ನಲ್ಲಿ ಕರೆದೊಯ್ಯುತ್ತಿದ್ದರು. ವೆಂಕು ಅವರು ತಮ್ಮ ಇಬ್ಬರು ಮಕ್ಕಳಾದ ಐಶ್ವರ್ಯ, ಪ್ರೀತಿ ಜೊತೆಗೆ ಪಕ್ಕದ ಮನೆಯ ವಿದ್ಯಾರ್ಥಿನಿ ಶ್ವೇತಾಳನ್ನು ಕರೆದುಕೊಂಡು ಹೊರಟಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.
ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಬಿಎಲ್ಡಿಇ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಘಟನೆ ಬಗ್ಗೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Bike collides, lorry, three SSLC, students, injured