ಚಾಮರಾಜನಗರ,ಮಾರ್ಚ್,25,2025 (www.justkannada.in): ಕೆಎಸ್ ಆರ್ ಟಿಸಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಬಳಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಬಾನೂರು ಗ್ರಾಮದ ರಾಜಮ್ಮ(50) ಶೃತಿ(28) ಮೃತಪಟ್ಟವರು. ಕೊಳ್ಳೇಗಾಲದಲ್ಲಿ ತಿಥಿ ಕಾರ್ಯಕ್ಕೆ ಬಂದು ವಾಪಾಸ್ ಆಗುವಾಗ ಸರ್ಕಾರಿ ಬಸ್ ಮತ್ತು ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Key words: Accident, Two dead, more than ,10 injured