ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಮಂಡ್ಯ,ಏಪ್ರಿಲ್,3,2025 (www.justkannada.in): ಕೆಎಸ್ ಆರ್ ಟಿಸಿ ಐರಾವತ ಬಸ್ ಕಾರಿಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ನಡೆದಿದೆ.

ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ.  ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬೆಂಗಳೂರು ಮೂಲದವರು ಎನ್ನಲಾಗಿದೆ. ಕಾರು ಚಾಲಕ ತೂಬಿನಕೆರೆ ಬಳಿ ಎಕ್ಸ್ ಪ್ರೆಸ್ ವೇಯಲ್ಲಿ ಎಕ್ಸಿಟ್ ಆಗುವಾಗ ಗೊಂದಲಕ್ಕೀಡಾಗಿ ಎಕ್ಸ್ ಪ್ರೆಸ್ ಹೈವೆಗೆ ಕಾರು ತಿರುಗಿಸಿದ್ದಾರೆ.

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಐರಾವತ ಬಸ್ ಕಾರಿಗೆ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು  ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ನಜ್ಜುಗುಜ್ಜಾಗಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Four death, horrific accident, Bengaluru-Mysore, Expressway