ಲಾರಿ ಪಲ್ಟಿಯಾಗಿ ಇಬ್ಬರು ಸಾವು : ಮೂವರಿಗೆ ಗಂಭೀರ ಗಾಯ

ಉತ್ತರ ಕನ್ನಡ,ಜನವರಿ,6,2025 (www.justkannada.in):  ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಬಳಿ ನಡೆದಿದೆ.

ಸುಳಿಮುರ್ಖಿ ಸಮೀಪ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಈ ಘಟನೆ ನಡೆದಿದೆ. ಮೃತರು ಬಿಹಾರ ಮೂಲದವರು ಎನ್ನಲಾಗಿದೆ. ಸಾಗರದಿಂದ ಹೊನ್ನಾವರಕ್ಕೆ  ಹೋಗುತ್ತಿದ್ದ ಆಟಿಕೆ ಲಾರಿ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ ಮೂವರು ಗಾಯಗೊಂಡಿದ್ದು ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹೊನ್ನಾವರ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

Key words: Two dead, lorry , accident