ರಾಣಿಪೇಟೆ ಜನವರಿ, 9,2025 (www.justkannada.in): ಕೆಎಸ್ ಆರ್ ಟಿಸಿ ಬಸ್ ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ನಡೆದಿದೆ.
ಕ್ಯಾಂಟರ್ ನಲ್ಲಿದ್ದ ನಾಲ್ವರು ಮತ್ತು ಕೆಎಸ್ಆರ್ಟಿಸಿ ಬಸ್ ಚಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೆಎಸ್ ಆರ್ ಟಿಸಿ ಬಸ್ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಲ್ಲೂರು ಗ್ರಾಮದ ಸರಸ್ವತಮ್ಮ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರ ಪೈಕಿ ನಾಲ್ವರು ಕೋಲಾರ ಮೂಲದವರು ಎನ್ನಲಾಗಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್ ಆರ್ಟಿಸಿ ಬಸ್ ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸಾಗುತ್ತಿದ್ದರು. ಈ ವೇಳೆ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Key words: KSRTC bus, canter, Accident, Five death