ಸರಣಿ ಅಪಘಾತ: ಕಾರಿನ ಮೇಲೆ ಲಾರಿ ಬಿದ್ದು 6 ಮಂದಿ ದುರ್ಮರಣ

ಬೆಂಗಳೂರು,ಡಿಸೆಂಬರ್,21,2024 (www.justkannada.in) : ಲಾರಿಗಳ ನಡುವೆ  ಸರಣಿ ಅಪಘಾತ ಸಂಭವಿಸಿ  ಲಾರಿ ಕಾರಿನ ಮೇಲೆ ಬಿದ್ದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಬಳಿ  ಸಂಭವಿಸಿದೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ  ಟ್ರಾಫಿಕ್ ಜಾಮ್  ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಹರಸಾಹಸ ಪಟ್ಟು ಮೃತದೇಹಗಳನ್ನ ಹೊರತೆಗೆದಿದ್ದಾರೆ. ಪೊಲೀಸರಿಗೆ ಸಾರ್ವಜನಿಕರು ಸಾಥ್ ಕೊಟ್ಟಿದ್ದಾರೆ.  ಕಾರಿನಲ್ಲಿದ್ದವರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಸ್ಥಳಕ್ಕೆ SP ಸಿಕೆ ಬಾಬಾ ಅವರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ವೋಲ್ವೋ ಕಾರು ಬೆಂಗಳೂರಿನಿಂದ ತುಮಕೂರಿನ ಮಾರ್ಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ.

Key words: accidents, 6 people, death, lorry, car