ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಚಿತ್ರದುರ್ಗ,ಮಾರ್ಚ್​, 9,2025 (www.justkannada.in):  ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50), ನಿರ್ದೇಚಿದಂಬರಾಚಾರ್(52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.  ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ ಎನ್ನಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಚಿತ್ರದುರ್ಗ  ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: accident, between, lorry, car, Five people, died