ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಪ್ರಕರಣ: ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಹಾವೇರಿ, ಜೂನ್‌ 28,ಜೂನ್,28,2024 (www.justkannada.in): ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ,  ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು  ಎಂದಿದ್ದಾರೆ.

ಹಾಗೆಯೇ  ಇಂದು ಹಾವೇರಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರದ ವತಿಯಿಂದ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು. ಮೃತರ ಆತ್ಮಗಳಿಗೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Key words:  accident, dead, compensation, CM Siddaramaiah