ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ

ಮೈಸೂರು,ಏಪ್ರಿಲ್,17,2025 (www.justkannada.in):  ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮಡಿಕೇರಿ ತಾಲ್ಲೂಕಿನ ಕಡಗನಹಳ್ಳಿ ಗ್ರಾಮದ ನಿವಾಸಿ ಶ್ಯಾಮಿಯೋಲ್ (22) ಸ್ಥಳದಲ್ಲಿ ಸಾವನಪ್ಪಿರುವ  ಯುವಕ. ಮತ್ತೊಬ್ಬ ಸವಾರ ನವೀನ್ (26) ಗಂಭೀರ ಗಾಯಗಳಾಗಿದ್ದು, ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಹೀರೋ ಹೋಂಡಾ ಬೈಕ್ ನಲ್ಲಿ ಇಬ್ಬರ ಸವಾರರು ಬರುತ್ತಿದ್ದರು. ಈ ವೇಳೆ ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words: lorry-bike accident, Rider, dies ,Mysore