ಮೈಸೂರು,ಮೇ,29,2023(www.justkannada.in): ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ನಾಲ್ಕಕ್ಕೂ ಹೆಚ್ಚು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದ ಬಳಿ ನಡೆದಿದೆ.
ಟಿ. ನರಸೀಪುರದ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಖಾಸಗಿ ಬಸ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿ ರಭಸಕ್ಕೆ ನಾಲ್ಕಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೋವಾ ಕಾರು ಸಂಪೂರ್ಣ ಜಖಂ ಆಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾರಿನಲ್ಲಿ ಸಿಲುಕಿರುವವರನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
Key words: accident- private bus – car – Mysore-four people- died