ಬೆಂಗಳೂರು,ಜೂನ್,10,2023(www.justkannada.in): ಹಿಂದೂ ಯುವಕನ ಹೆಸರಿನಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ ಡೇಟಿಂಗ್ ಆ್ಯಪ್ ಮೂಲಕ ಯುವತಿಗೆ ವಂಚಿಸಿದ್ದ ಆರೋಪಿಯನ್ನ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುದಾಸಿರ್ ಬಂಧಿತ ಆರೋಪಿ. ಅನಿರುದ್ ಹೆಸರಿನಲ್ಲಿ ಆರೋಪಿ ಮುದಾಸಿರ್ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಆ್ಯಪ್ ನಲ್ಲಿ ಸಂಗಾತಿ ಹುಡುಕುತ್ತಿದ್ದ ಯುವತಿಗೆ ಮೆಸೇಜ್ ಕಳಿಸಿದ್ದ. ಬಳಿಕ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.
ನಂತರ ತಾಯಿಗೆ ಹುಷಾರಿಲ್ಲವೆಂದು ಹೇಳಿ ಯುವತಿ ಬಳಿ 1 ಲಕ್ಷ ಹಣವನ್ನ ಪಡೆದಿದ್ಧ ಆರೋಪಿ ಮುದಾಸಿರ್ ಬಳಿಕ ತಾಯಿ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಿದ್ದ. ಇದಾದ ನಂತರ ದುಬೈಗೆ ಹೋಗಿ ಬರುತ್ತೆನೆಂದು ಫೋನ್ ಸ್ಪಿಚ್ ಆಫ್ ಮಾಡಿದ್ದ. ಬಳಿಕ ಮುದಾಸಿರ್ನನ್ನ ಪತ್ತೆ ಹಚ್ಚಿದ ಯುವತಿಗೆ ಶಾಕ್ ಎದುರಾಗಿತ್ತು. ಅನಿರುದ್ದ್ ಹೆಸರಿನವನು ಅನಿರುದ್ದ್ ಅಲ್ಲ ಮುದಾಸಿರ್ ಅನ್ನೋದರ ಜೊತೆಗೆ ಮುದಾಸಿರ್ ಗೆ ಮತ್ತೊಂದು ಮದುವೆಯಾಗಿ ಹೆಂಡತಿ ಮಕ್ಕಳು ಇದ್ದಾರೆಂಬುದು ಯುವತಿಗೆ ಗೊತ್ತಾಗಿದೆ. ಕೊನೆಗೆ ನೊಂದ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ಪೊಲೀಸರು ಆರೋಪಿ ಮುದಾಸಿರ್ ನನ್ನು ಬಂಧಿಸಿದ್ದಾರೆ.
Key words: Accused – cheated- young woman – dating app -arrested.