ಮೈಸೂರು,ಜ,5,2020(www.justkannada.in): ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಸತಿ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಕೆ. ಬೆಳತ್ತೂರಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೆನು ಪ್ರಕಾರ ಆಹಾರ ವಿತರಿಸುತ್ತಿಲ್ಲ. ಆದರೂ ಮೆನು ಪ್ರಕಾರ ಆಹಾರ ನೀಡಲಾಗುತ್ತಿದೆ ಎಂದು ಹಣ ಲಪಟಾಯಿಸಲಾಗುತ್ತಿದೆ. ವಿದ್ಯಾರ್ಥಿಗಳ ಬಯೋಮೆಟ್ರಿಕ್ ಪಡೆಯುವುದನ್ನು ಸಹ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದುಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.
ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಮಾರಾಟ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
Key words: Accused -poor quality- food –supply-mysore-Protest – residential school -students.