ಮೈಸೂರು,ಜನವರಿ,23,2021(www.justkannada.in): ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ. ಆದರೆ ಅಕ್ರಮ ಗಣಿಗಾರಿಕೆ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂಧು ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.
ಮೈಸೂರಿನ ಜೆಪಿ ನಗರದಲ್ಲಿ ನಿರ್ಮಾಣವಾಗಿರುವ ಅಕ್ಕಮಹಾದೇವಿ ಪ್ರತಿಮೆ ಸಿಎಂ ಬಿಎಸ್ ಯಡಿಯೂರಪ್ಪ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ, ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳು ನಡೆಯುತ್ತಿವೆ. ರಸ್ತೆ ಕಾಮಗಾರಿಗಳಿಗೆ ಗಣಿಗಾರಿಕೆ ಅವಶ್ಯಕತೆ ಇದೆ. ಆದರೆ ಅಕ್ರಮ ಗಣಿಗಾರಿಕೆ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಸಕ್ರಮ ಗಣಿಗಾರಿಕೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲೂ ಗಣಿಗಾರಿಕೆ ಪರಿಶೀಲನೆಗೆ ಆಯಾ ಡಿಸಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಪ್ರಕರಣದಲ್ಲಿ ಮೃತ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಪರಿಹಾರ ಕೊಡುತ್ತೇವೆ ಎಂದರು.
ಈ ಬಾರಿ ಬಜೆಟ್ ಕೊರತೆ ಇದೆ ಕೋವಿಡ್ ಕಾರಣದಿಂದಾಗಿ ರಾಜ್ಯದಲ್ಲಿ ಸಂಪನ್ಮೂಲ ಕೊರತೆ ಇದೆ. ಕಳೆದ ಬಾರಿ 2 ಲಕ್ಷ 37 ಸಾವಿರ ಕೋಟಿ ರೂ.ಬಜೆಟ್ ಗಾತ್ರವಿತ್ತು. ಈ ಬಾರಿ ಆ ಗಾತ್ರದ ಬಜೆಟ್ ಇರಲ್ಲ. ರಾಜ್ಯದಲ್ಲಿ ಶೇ 90ರಷ್ಟು ಕೋವಿಡ್ ನಿಯಂತ್ರಣದಲ್ಲಿದೆ. ಕೋವಿಡ್ ಬೇಕಾಗಿರುವಷ್ಟು ಹಣಕಾಸು ನೆರವನ್ನು ಸರಕಾರ ಪೂರೈಸುತ್ತದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.
Key words: action-against -illegal mining- CM BS Yeddyurappa-mysore