ಬೆಂಗಳೂರು, ಮಾರ್ಚ್ 11, 2020 (www.juskannada.in): ಕೊರೋನಾ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ನಗರ (ಜಿಲ್ಲೆ) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಎಲ್ ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ (1 ರಿಂದ 5) ಶಾಲೆಗಳ ತರಗತಿಗಳಿಗೆ ರಜೆ ಘೋಷಿಸಲಾಗಿದೆ.
ಈ ಆದೇಶ ಪಾಲಿಸುವುದು ಈ ಪ್ರದೇಶಗಳಲ್ಲಿರುವ ಎಲ್ಲಾ ಶಾಲೆಗಳ ಕರ್ತವ್ಯ. ಕೆಲವು ಖಾಸಗಿ ಶಾಲೆಗಳು ಸರ್ಕಾರದ ಈ ಆದೇಶಕ್ಕೆ ಗೌರವ ಕೊಡದೆ ತಮ್ಮದೇ ಬೇರೆ ಸಾಮ್ರಾಜ್ಯ ಎಂದು ತಿಳಿದು ವ್ಯತಿರಿಕ್ತವಾಗಿ ವರ್ತಿಸುತ್ತಿರುವುದು ತಿಳಿದುಬಂದಿದೆ.
ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸದೆ ಇರುವ ಖಾಸಗಿ ಶಾಲೆಗಳಿಗೆ ಈ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಸರ್ಕಾರದ ಆದೇಶ ಪಾಲಿಸದಿರುವ ಶಾಲೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.