ಮೈಸೂರು, ನವೆಂಬರ್,5,2020(www.justkannada.in): ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೊರೋನಾ ನಿಯಮ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕಲು ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು ಮುಂದಾಗಿದ್ದಾರೆ.
ಈ ಸಂಬಂಧ ಮೈಸೂರು ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳಿಗೆ ಕೆಲ ನಿರ್ಬಂಧಗಳನ್ನ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾಸ್ಕ್ ಧರಿಸದೇ ಹಲವಾರು ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದನ್ನ ಗಮನಿಸಲಾಗಿದೆ. ಕೊರೋನಾ ತಡೆಗಟ್ಟುವ ಸಲುವಾಗಿ ಸರ್ಕಾರದ ಮಾರ್ಗಸೂಚಿಯಂತೆ ಒಳಾಂಗಣ ಸ್ಥಳ ಮತ್ತು ಹೊರಾಂಗಣ ಮೈದಾನದಲ್ಲಿ ಆಯೋಜಿಸುವ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ ಅನುಷ್ಟಾನ ನಿಟ್ಟಿನಲ್ಲಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು ಈ ಕೆಳಕಂಡ ನಿರ್ದೇಶನಗಳನ್ನ ನೀಡಿದ್ದಾರೆ.
ಒಳಾಂಗಣ ಮತ್ತು ಹೊರಾಂಗಣದಲ್ಲಿ ಆಯೋಜಿಸುವ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಕಾರ್ಯ ವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆಯೋಜಿಸುವ ಕಾರ್ಯಕ್ರಮಕ್ಕೆ ಕಕೋವಿಡ್ -19 ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ಒಬ್ಬರು ಜವಾಬ್ದಾರಿಯುತ ಪ್ರತಿನಿಧಿಯನ್ನು ಆಯೋಜಕರೇ ನೇಮಿಸಿ ಅವರ ಮುಖಾಂತರ ಅನುಮತಿಗಾಗಿ ಅರ್ಜಿಯನ್ನು ಸಲ್ಲಿಸುವುದು.
ಒಳಾಂಗಣ ಸ್ಥಳಗಳಲ್ಲಿ 200 ಜನರ ಗರಿಷ್ಟ ಮಿತಿ ಒಳಪಟ್ಟು ಸಭಾ ಭವನದ ಒಟ್ಟು ಸಾಮರ್ಥ್ಯದ ಗರಿಷ್ಟ ಶೇ.50 ರಷ್ಟಕ್ಕೆ ಹಾಗೂ ಹೊರಾಂಗಣ ಸ್ಥಳಗಳಲ್ಲಿ ಮೈದಾನ/ ಸ್ಥಳ ಗಮನದಲ್ಲಿಟ್ಟುಕೊಂಡು ಸಾಮಾಜಿಕ ಆಂತರದ ಕಟ್ಟುನಿಟ್ಟಿನ ಪಾಲನೆಯ ಅನುಗುಣವಾಗಿ ಅನುಮತಿ ನೀಡಲಾಗುವುದು,
ಕೋವಿಡ್-19 ಮಾರ್ಗಸೂಚಿಗಳ ಅನುಷ್ಟಾನಕ್ಕಾಗಿ ವ್ಯಾಪಾರ ಮಳಿಗೆ, ಮಾರುಕಟ್ಟೆ, ವಾಣಿಜ್ಯ ಸಂಕೀರ್ಣ. ಆ ಸ್ಥಳ, ಸಿನಿಮಾ ಮಂದಿರ, ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಒಬ್ಬರು ಜವಾಬ್ದಾರಿಯುತ ಆಗುಹನ ಪ್ರತಿನಿಧಿಯನ್ನು ನೇಮಿಸಿ ಅವರ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನು ಸ್ಥಳೀಯ ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸುವುದು. ಠಾಣಾಧಿಕಾರಿಗಳು ಈ ಪಟ್ಟಿಯನ್ನು ರಾಣಾವಾರು ನಿರ್ವಹಿಸಿ ಅನುಷ್ಟಾನ ಪ್ರತಿನಿಧಿಯೊಂದಿಗೆ ಸಮನ್ವಯ ಸಾಧಿಸುವುದು.
ಕಾರ್ಯಕ್ರಮಗಳನ್ನು ಆಯೋಜಿಸುವ ಸಭಾಂಗಣ ಹಾಗೂ ಮೈದಾನಗಳ ಪ್ರವೇಶದ್ವಾರಗಳಲ್ಲಿ ಧರ್ಮಲ್ ಸ್ಕ್ಯಾನಿಂಗ್ ಮತ್ತು ಸ್ಯಾನಿಟೈಜರ್ ನ ವ್ಯವಸ್ಥೆ ಕಲ್ಪಿಸುವುದು ಹಾಗೂ ಶುಚಿತ್ವ ಕಾಪಾಡುವುದು. ಕೋವಿಡ್ 19 ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಅನುವಾಗುವಂತೆ ಸ್ವಯಂಸೇವಕರನ್ನು ತಾವೇ ಮಾಡುವುದು, ಹಾಗೂ ಈ ಕುರಿತು ಪೊಲೀಸರ ಸಹಾಯವನ್ನು ಪಡೆಯವುದು. ಈ ಆದೇಶವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ಅನ್ವಯಿಸುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಆದೇಶದಲ್ಲಿ ತಿಳಿಸಿದ್ದಾರೆ.
Key words: Action –corona-mysore-police commissioner – ordered -some restrictions – public programs