ಶಿವಮೊಗ್ಗ,ಜನವರಿ,5,2021(www.justkannada.in): ಕೊಳಚೆ ಪ್ರದೇಶ ನಿವಾಸಿಗಳಿಗೆ ಶೀಘ್ರದಲ್ಲಿ ಸ್ವತ್ತಿನ ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಇಂದು ಶಿವಮೊಗ್ಗದಲ್ಲಿ ನಗರದ ಕೊಳಚೆಪ್ರದೇಶದ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ವಿತರಿಸುವ ಸಂಬಂಧ ಸಮೀಕ್ಷೆ ಕೈಗೊಳ್ಳುವ ಬಗ್ಗೆ ತರಭೇತಿ ಕಾರ್ಯಾಗಾರವನ್ನು ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದ ಎಲ್ಲಾ ಕೊಳಚೆ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಬಡವರ ಮನೆಗಳಿಗೆ ಹಕ್ಕು ಪತ್ರಗಳನ್ನು ಕೊಡಬೇಕು ಅನ್ನುವಂತಹ ತೀರ್ಮಾನವನ್ನು ನಮ್ಮ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡ ನಂತರ 26-11-2020 ರ ನಂತರ ಒಂದು ಆದೇಶ ಹೊರಡಿಸಿ ಸರಕಾರಿ ಕಟ್ಟಡಗಳ ಯಾವುದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದು ಸರಕಾರಿ ಭೂಮಿ ಇದೆ ಅದನ್ನು ಬಳಸಿಕೊಂಡು ನಗರ ಪ್ರದೇಶದ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕಡುಬಡವರಿಗೆ ಹಕ್ಕು ಪತ್ರ ಹಂಚಿಕೆ ಮಾಡುಬೇಕೆಂದು ಸರಕಾರಿ ಆದೇಶ ಮಾಡಲಾಗಿದೆ. ಅದರಂತೆ ಶಿವಮೊಗ್ಗ ನಗರದಲ್ಲೂ ಕೂಡ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಸುವರ್ಣಾ ಶಂಕರ್, ಆಶ್ರಯ ಸಮಿತಿಯ ಅಧ್ಯಕ್ಷರಾದ ಶಶೀಧರ್, ಮಹಾನಗರಪಾಲಿಕೆ ಆಯುಕ್ತರಾದ ಚಿದಾನಂದರವರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Action – taken – issuing – slum dwellers-Minister -KS Eshwarappa.