Chief Minister Siddaramaiah has taken a serious note of the alleged royal treatment being given to actor Darshan and others in Parappana Agrahara jail and directed the immediate suspension of the erring officials.
ಬೆಂಗಳೂರು, ಆ.26,2024: (www.justkannada.in news) ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.
ಆರೋಪಿ ನಟ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.
ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಹಿನ್ನೆಲೆ:
ನಿನ್ನೆಯಷ್ಟೆ ನಟ ದರ್ಶನ್ ಕಾರಾಗೃಹದಲ್ಲಿ ಇತರ ಆರೋಪಿಗಳ ಜತೆ ಲಾನ್ ನಲ್ಲಿ ಚೇರ್ ಮೇಲೆ ಕುಳಿತು ಸಿಗರೇಟು ಸೇದುತ್ತಾ, ಕಾಫಿ ಹೀರುತ್ತಿರುವ ಪೋಟೋ ಸುದ್ದಿಯಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಎಡೆಮಾಡಿತ್ತು. ಆರೋಪಿಯೊಬ್ಬ ಜೈಲಿನಲ್ಲಿ ಈರೀತಿ ಐಷರಾಮಿಯಾಗಿರುವುದನ್ನು ಕಂಡ ಪೊಲೀಸ್ ವ್ಯವಸ್ಥೆ ಬಗ್ಗೆ ಟೀಕೆ ವ್ಯಕ್ತಪಡಿಸಿ, ಸರಕಾರವನ್ನು ತರಾಟೆ ತೆಗೆದುಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬೇರೆಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದಾರೆ.
key words: CM’s instructions, Actor Darshan, shifted, from ,Parappana Agrahara Jail
SUMMARY:
Chief Minister Siddaramaiah has taken a serious note of the alleged royal treatment being given to actor Darshan and others in Parappana Agrahara jail and directed the immediate suspension of the erring officials.