ಬೆಂಗಳೂರು, ಜನವರಿ,6,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡಗೆ ಇದೀಗ ಮತ್ತೆ ಸಂಕಷ್ಟ ಶುರುವಾಗಿದೆ.
ನಟ ದರ್ಶನ್ ಹಾಗೂ ಪವಿತ್ರಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿರುವಂತ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ವಕೀಲರು ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಪ್ರಕರಣದ ಎ2 ನಟ ದರ್ಶನ್ ಹಾಗೂ ಎ1 ಪವಿತ್ರಾಗೌಡ ಸೇರಿ 7 ಮಂದಿಗೆ ಹೈಕೋರ್ಟ್ ಡಿಸೆಂಬರ್ 13 ರಂದು ಜಾಮೀನು ನೀಡಿತ್ತು.
Key words: Actor, Darshan, cancellation, bail, Petition, Supreme Court