ಬೆಂಗಳೂರು,ಜುಲೈ,8,2021(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ(80) ನಿಧರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಬ್ರೈನ್ ಸ್ಟ್ರೋಕ್ ಗೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಈ ನಡುವೆ ಚಿಕಿತ್ಸೆ ಫಲಿಸದೆ ನಾರಾಯಣಮ್ಮ ಮೃತಪಟ್ಟಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ದುನಿಯಾ ವಿಜಯ್ ಅವರ ತಾಯಿಗೆ ಕೊರೋನಾ ಸೋಂಕು ತಗುಲಿತ್ತು. ನಾರಾಯಣಮ್ಮ ಅವರಿಗೆ ಮನೆಯಲ್ಲೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಕೊರೋನಾದಿಂದ ಚೇತರಿಸಿಕೊಂಡಿದ್ದರು ಎನ್ನಲಾಗಿದೆ.
Key words: Actor- Duniya Vijay’s- mother- passes away