ಚೆನ್ನೈ,ನವೆಂಬರ್,24,2022(www.justkannada.in): ಬಹುಭಾಷಾ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜ್ವರದಿಂದ ಬಳಲುತ್ತಿರುವ ನಟ ಕಮಲ್ ಹಾಸನ್ ಚೆನ್ನೈನ ಶ್ರೀರಾಮಚಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ತಜ್ಞ ವೈದ್ಯರಿಂದ ಕಮಲ ಹಾಸನ್ಗೆ ಟ್ರೀಟ್ ಮೆಂಟ್ ಪಡೆದುಕೊಳ್ಳುತ್ತಿದ್ಧಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಿಡೀರ್ ಆಸ್ಪತ್ರೆಗೆ ದಾಖಲಾಗಿದ್ಧಾರೆ.
ನಾರ್ಮಲ್ ಚೆಕಪ್ಗಾಗಿ ದಾಖಲಾಗಿದ್ದಾರೆ ಎಂದು ಕುಟುಂಬದ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ನಟ ಕಮಲ್ ಹಾಸನ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆ ನೀಡಿದ್ಧಾರೆ.
Key words: Actor- Kamal Haasan- admitted – hospital.