ಬೆಂಗಳೂರು,ಜೂನ್,14,2021(www.justkannada.in): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಜೆಪಿ ನಗರದ 7ನೇ ಹಂತದಲ್ಲಿ ಅಪಘಾತವಾಗಿ ಸಂಚಾರಿ ವಿಜಯ್ ತಲೆಗೆ ತೀವ್ರ ಪೆಟ್ಟಾಗಿತ್ತು. ಮೆದುಳಿನ ಬಲಭಾಗದಲ್ಲಿ ತೀವ್ರ ಗಾಯವಾಗಿ ರಕ್ತ ಸೋರುತ್ತಿದ್ದ ಹಿನ್ನೆಲೆ ಅವರರಿಗೆ ಬನ್ನೇರುಘಟ್ಟ ರಸ್ತೆಯಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿ ಐಸಿಯುನಲ್ಲಿ ಇರಿಸಲಾಗಿತ್ತು. ಕೋಮದಲ್ಲಿದ್ದ ವಿಜಯ್ರ ಬ್ರೈನ್ ಫಂಕ್ಷನ್ ನಿಂತು ಹೋಗಿತ್ತು. ಟ್ರೀಟ್ಮೆಂಟ್ಗೆ ಅವರು ಸ್ಪಂದಿಸುತ್ತಿಲ್ಲ ಎಂದು ವೈದ್ಯರು ಹೇಳಿದ್ದರು.
ಇದೀಗ ನಟ ಸಂಚಾರಿ ವಿಜಯ್ ಮೃತಪಟ್ಟಿದ್ದು ಇವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಟ ಸಂಚಾರಿ ವಿಜಯ್ ನಿಧನಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಸಂತಾಪ.
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ನಟ ಸಂಚಾರಿ ವಿಜಯ ನಿಧನದಿಂದ ರಂಗಭೂಮಿ, ಸಿನೆಮಾ ರಂಗಗಳೆರಡಕ್ಕೂ ತುಂಬಲಾರದ ನಷ್ಟವಾಗಿದೆ. ಅವರು ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ಬಡವಾಗಿದೆ. ಮೃತರಿಗೆ ಚಿರಶಾಂತಿ ಸಿಗಲಿ. ಮತ್ತು ಕುಟುಂಬಸ್ಥರಿಗೆ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ಸೂಚಿಸಿದ್ದಾರೆ.
ನಟ ಸಂಚಾರಿ ವಿಜಯ್ ನಿಧನಕ್ಕೆ ಸಚಿವ ಬಿಸಿ ಪಾಟೀಲ್ ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗದ ಉದಯೋನ್ಮುಖ ಕಲಾವಿದ, ಸ್ನೇಹಜೀವಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರು ವಿಧಿವಶರಾದ ಸುದ್ಧಿ ತಿಳಿದು ಆಘಾತವಾಯಿತು. ಯುವನಟನ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಭಗವಂತ ಅವರ ಆತ್ಮಕ್ಕೆ ಸದ್ಗತಿ ನೀಡಲಿ,ಕುಟುಂಬ ವರ್ಗ & ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Key words: Actor –sanchari Vijay- no more-Condolences