ಅಮೇರಿಕ,ಜನವರಿ,4,2025 (www.justkannada.in): ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅಮೇರಿಕಾದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮೂತ್ರ ಕೋಶದ ಕ್ಯಾನ್ಸರ್ ಹಿನ್ನೆಲೆ ಆಪರೇಷನ್ ಮಾಡಿಸಿಕೊಂಡಿದ್ದರು. ಇದಾದ ಬಳಿಕ ಕಳೆದ ಎರಡು ದಿನಗಳ ಹಿಂದೆ ವಿಡಿಯೋ ಮೂಲಕ ಮಾತನಾಡಿದ್ದ ಶಿವರಾಜ್ ಕುಮಾರ್, ತಾವು ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಖುಷಿಯ ವಿಚಾರ ಹಂಚಿಕೊಂಡಿದ್ದರು.
ಈಗ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯಕೀಯ ತಪಾಸಣೆಯಲ್ಲಿದ್ದ ಅವರು, ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಜನವರಿ 24ರಂದು ಬೆಂಗಳೂರಿಗೆ ಮರಳಿದ್ದು, ಆ ಬಳಿಕ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
Keyw words: Actor, Shivarajkumar ,discharged ,hospital