ಮೈಸೂರು,ಸೆಪ್ಟೆಂಬರ್,18,2020(www.justkannada.in) : ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಉದ್ಯಾನವನಕ್ಕೆ ಅಧಿಕೃತವಾಗಿ ನಗರಪಾಲಿಕೆಯಿಂದ ಹೆಸರು ಇಡಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಮೇಯರ್ ತಸ್ನೀಂ ಹೇಳಿದರು.
ಕರುಣಾಮಯಿ ವಿಷ್ಣು ಅಭಿಮಾನಿ ಬಳಗ ಹಾಗೂ ಪಾತಿ ಫೌಂಡೇಶನ್ ವತಿಯಿಂದ ನಟ ದಿ.ಡಾ.ವಿಷ್ಣುವರ್ಧನ್ ಅವರ 70ನೇ ವರ್ಷದ ಜನ್ಮದಿನಾಚರಣೆ ಪ್ರಯುಕ್ತ ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಷ್ಣುವರ್ಧನ್ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವುದು ಬಹಳ ಸಂತೋಷಕರ ವಿಚಾರ. ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಸದಸ್ಯರು ಉದ್ಯಾನವನದಲ್ಲಿ ಪ್ರತಿಮೆ ಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದು, ಈ ಕುರಿತು ಚರ್ಚಿಸಿ ಸೂಕ್ತ ತೀರ್ಮಾನಕೈಗೊಳ್ಳಲಾಗುವುದು ಎಂದರು.
ಶ್ರೀ ಇಳೈಆಳ್ವಾರ್ ಸ್ವಾಮೀಜಿ ,ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ.ಪ್ರಕಾಶ್, ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ಪಾತಿ ಫೌಂಡೇಶನ್ ಅಧ್ಯಕ್ಷ ಎಂ.ಡಿ ಪಾರ್ಥ ಸಾರಥಿ,ಯುವ ಮುಖಂಡ ವಿಕ್ರಂ ಅಯ್ಯಂಗಾರ್ ಇತರರು ಇದ್ದರು.
key words : Actor-Vishnuvardhan’s-Birthday-Party-Planting-saplings-special-practice