ಬೆಂಗಳೂರು,ಜನವರಿ,8,2021(www.justkannada.in): ವಂಚನೆ ಪ್ರಕರಣದಲ್ಲಿ ಬಂಧಿತನಾಗಿರುವ ಯುವರಾಜ್ ಜತೆ ಹಣಕಾಸು ವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆ ಎದುರಿಸಿ ಹೊರ ಬಂದರು.
ವಂಚಕ ಯುವರಾಜ್ ನಿಂದ ನಟಿ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ 1 ಕೋಟಿ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.
ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಿ ಸತತ ನಾಲ್ಕು ಗಂಟೆಗಳ ಕಾಲ ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಎದುರಿಸಿದರು. ಇದೀಗ ಸಿಸಿಬಿ ವಿಚಾರಣೆ ಮುಕ್ತಾಯವಾಗಿದ್ದು ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ನಟಿ ರಾಧಿಕಾ ಕುಮಾರಸ್ವಾಮಿ, ಸಿಸಿಬಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ಅಧಿಕಾರಿಗಳು ಕರೆದರೇ ವಿಚಾರಣೆಗೆ ಹಾಜರಾಗುವೆ ಎಂದರು.
ನನ್ನನ್ನ ಹಾಗೂ ಯುವರಾಜ್ ನನ್ನ ಮುಖಾಮುಖಿಯಾಗಿ ವಿಚಾರಣೆ ನಡೆಸಿಲ್ಲ. ನಾನು ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗಿಲ್ಲ ಎಂದು ತಿಳಿಸಿದರು.
Key words: Actress -Radhika Kumaraswamy- reacts- after- CCB inquiry