ಬೆಂಗಳೂರು, ಮಾರ್ಚ್ 06, 2020 (www.justkannada.in): ನಟಿ ರಾಧಿಕಾ ಪಂಡಿತ್ ಈ ವರ್ಷ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ.
ಈ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಯಶ್ ಪತ್ನಿ ರಾಧಿಕಾ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ್ದಾರೆ. ಈ ಬಾರಿ ಹುಟ್ಟುಹಬ್ಬ ಆಚರಿಸುವುದಿಲ್ಲ ಎಂದು ಹೇಳಿದ್ದಾರೆ.
ರಾಧಿಕಾ ಪಂಡಿತ್ ಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಮಕ್ಕಳ ಆರೈಕೆ ಮಾಡಬೇಕು. ಜೊತೆಗೆ ಕೊರೊನಾ ವೈರಸ್ ಭೀತಿ ಕೂಡ ಕಾಡುತ್ತಿದೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬದ ಆಚರಣೆ ಬೇಡ ಎಂದು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.
ಮದುವೆ ನಂತರ ರಾಧಿಕಾ ಪಂಡಿತ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಕಡಿಮೆ. ಈ ಬಾರಿ ಕೂಡ ಹುಟ್ಟುಹಬ್ಬ ಆಚರಣೆ ಕ್ಯಾನ್ಸಲ್ ಆಗಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.