ಬೆಂಗಳೂರು,ಮಾರ್ಚ್,27,2025 (www.justkannada.in): ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಜಾಮೀನು ಅರ್ಜಿಯನ್ನ ವಜಾಗೊಳಿಸಿ ಬೆಂಗಳೂರಿನ 64ನೇ ಸಿಸಿ ಎಚ್ ನ್ಯಾಯಾಲಯ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟಿ ರನ್ಯಾರಾವ್ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಇದೀಗ ಕೋರ್ಟ್ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.
ಈ ಹಿನ್ನೆ ನಟಿ ರನ್ಯಾರಾವ್ ಅರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ವಜಾಗೊಳಿಸಿತ್ತು. ನಂತರ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಸೆಷನ್ಸ್ ಕೋರ್ಟ್ ನಿಂದಲೂ ಅರ್ಜಿ ವಜಾಗೊಂಡಿದೆ. ಈ ಮೂಲಕ ನಟಿ ರನ್ಯಾರಾವ್ ಗೆ ಜೈಲೇಗತಿಯಾಗಿದೆ.
Key words: Gold smuggling case, Actress, Ranya Rao, bail plea, dismissed